ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ: ಬಿ.ವೈ ವಿಜಯೇಂದ್ರ

0
Spread the love

ದಕ್ಷಿಣ ಕನ್ನಡ: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಪ್ರಕಟಿಸಿದರು.

Advertisement

ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ; ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ಅಭೂತಪೂರ್ವ ಕಾರ್ಯಕ್ರಮ ಇಲ್ಲಿ ಆಯೋಜಿಸಲಾಗಿದೆ ಎಂದರು. ರಾಜ್ಯದ ರೈತರು, ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲವೆಂದು ಆಕ್ಷೇಪಿಸಿ ಮೆಕ್ಕೆ ಜೋಳ ಬೆಳೆಗಾರರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here