ಬೆಂಗಳೂರು: ಇತ್ತೀಚೆಗೆಷ್ಟೇ ಬೀದರ್ ನಲ್ಲಿ ಎಟಿಎಂ ವಾಹನ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಕೋಟ್ಯಾಂತರ ರೂಪಾಯಿ ಇದ್ದ ಹಣದ ಟ್ರಂಕ್ ದೋಚಿರುವ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಹೃದಯಭಾಗದಲ್ಲೇ ಅತಿದೊಡ್ಡ ದರೋಡೆ ನಡೆದಿದೆ. ಗ್ಯಾಂಗ್ವೊಂದು ಹಾಡಹಗಲೇ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂಪಾಯಿ ಹಣ ದೋಚಿಕೊಂಡು ಪರಾರಿಯಾಗಿದೆ.
ಪ್ರಾಥಮಿಕ ಮಾಹಿತಿ ಅನುನಾರ ಒಟ್ಟು 6 ಮಂದಿ ಆರೋಪಿಗಳ ಪೋಟೋ ಬಿಡುಗಡೆ ಮಾಡಿದೆ. ಹಳೆ ಆರೋಪಿಗಳು ಹಾಗು ಕೆಲ ಶಂಕಿತರ ಫೋಟೋ ಬಿಡುಗಡೆ ಮಾಡಲಾಗಿದ್ದು, ನಾಕ ಬಂದಿಯಲ್ಲಿ ಈ ಫೋಟೋ ದಲ್ಲಿರೋ ವ್ಯಕ್ತಿಗಳ ಫೋಟೋ ಮ್ಯಾಚ್ ಮಾಡುವಂತೆ ಎಲ್ಲಾ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ದರೋಡೆಕೋರರು ತಂದಿದ್ದ ಇನ್ನೋವಾ ಕಾರಿಗೆ ನಕಲಿ ನಂಬರ್ ಪ್ಲೇಟ್ ಅಳವಿಡಿಸಿರುವುದು ಬೆಳಕಿಗೆ ಬಂದಿದೆ. ಹೌದು..KA 03 NC 8052 ಸಂಖ್ಯೆಯ ಇನ್ನೋವಾ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದಾರೆ. ಆದ್ರೆ, KA 03 NC 8052 ಸಂಖ್ಯೆಯ ಮೂಲ ಕಾರು ಮಾರುತಿ ಸುಜುಕಿ ಎಂದು ತಿಳಿದುಬಂದಿದೆ. ಇದರಿಂದ ಈ ಗ್ಯಾಂಗ್ ಪಕ್ಕಾ ಪ್ಲ್ಯಾನ್ ಮಾಡಿಯೇ ಈ ಕೃತ್ಯ ಎಸಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ.
ಹಣ ದರೋಡೆ ಮಾಡಿ ಗ್ಯಾಂಗ್, ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಡೇರಿ ಸರ್ಕಲ್, ಕೋರಮಂಗಲ, ಸೋನಿ ವರ್ಡ್ ಜಂಕ್ಷನ್, ದೊಮ್ಮಲೂರು, ಮಾರತ್ತಹಳ್ಳಿ, ವೈಟ್ ಫಿಲ್ಡ್ ಮಾರ್ಗವಾಗಿ ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ದರೋಡೆಕೋರರ ಗ್ಯಾಂಗ್ ಬೆನ್ನುಬಿದ್ದಿದ್ದಾರೆ.


