ಬೆಂಗಳೂರು:- ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಜೋರಾಗಿದ್ದು, ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಟೀಕೆ ಮಾಡಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ. ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ.
ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನ ಈಡೇರಿಸಿಲ್ಲ, ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.


