ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಬೆಳ್ಳಟ್ಟಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದಾಸೋಹಮಠದ ಬಸವರಾಜ ಸ್ವಾಮೀಜಿಗಳ 25ನೇ ವರ್ಷದ ಪಟ್ಟಾಧಿಕಾರದ ಪ್ರಯುಕ್ತ ಬೆಳ್ಳಿ ಮಹೋತ್ಸವ ಕಾರ್ಯಕ್ರಮವು ನ.21ರಂದು ನಡೆಯಲಿದೆ.
ಕಾರ್ಯಕ್ರಮದ ನಿಮಿತ್ತ ನ. 23ರಿಂದ ಸತತ 60 ದಿನಗಳ ಕಾಲ ನಡೆದ ಬಸವ ಪುರಾಣದ ಮಂಗಲೋತ್ಸವ ನಡೆಯಲಿದೆ. ಪಕ್ಕದ ನಾರಾಯಣಪುರದ ಶ್ರೀ ಬಸವೇಶ್ವರ ದೇವಸ್ಥಾನದಿಂದ ಪೂರ್ಣಕುಂಭ ಮತ್ತು ಸಕಲ ವಾದ್ಯಗಳೊಂದಿಗೆ ಬಸವ ಪುರಾಣ ಗ್ರಂಥ ಹಾಗೂ ಬಸವರಾಜ ಸ್ವಾಮೀಜಿಗಳ ಭವ್ಯ ಮೆರವಣಿಗೆ ನಡೆಯಲಿದೆ.
ನ. 22ರ ಬೆಳಿಗ್ಗೆ 8 ಗಂಟೆಗೆ ಸಕಲ ವೈಭವದೊಂದಿಗೆ ನಾಡಿನ 25 ಪೂಜ್ಯರಿಗೆ ಮಂಟಪ ಪೂಜಾಕಾರ್ಯ ನೆರವೇರಲಿದೆ. ಸಂಜೆ ಶಿರಹಟ್ಟಿಯ ಜ.ಫ. ಸಿದ್ದರಾಮ ಸ್ವಾಮೀಜಿ, ನಾಗಭೂಷಣ ಸ್ವಾಮೀಜಿ, ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ಬನ್ನಿಕೊಪ್ಪದ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಪ್ರಭುಲಿಂಗ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಪುರಾಣ ಮಂಗಲೋತ್ಸವ ನಡೆಯಲಿದೆ. ಸಮಾರೋಪ ಮತ್ತು ಕರ್ಪೂರದ ಕಾರ್ತಿಕೋತ್ಸವದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸಲಿದ್ದು, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.


