ಸಹಕಾರ ಸಂಘಗಳಿಂದ ಸಮಗ್ರ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಸಹಕಾರ ಸಂಘಗಳ ಮೂಲಕ ಸ್ವಾವಲಂಬಿ, ಸಮೃದ್ಧ, ಸ್ವಾಭಿಮಾನದ ರಾಷ್ಟ್ರವಾಗಿ ಭಾರತ ದೇಶ ಹೊರಹೊಮ್ಮಲಿದೆ. ಇದಕ್ಕಾಗಿ ದೇಶದಾದ್ಯಂತ ಚಳುವಳಿಗಳು ನಡೆದಿವೆ. ಸಹಕಾರ ಸಂಘಗಳಿಂದ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

Advertisement

ಬುಧವಾರ ಜೆ.ಸಿ. ನಗರದ ಮುನ್ಸಿಪಲ್ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ಧಾರವಾಡ ಜಿಲ್ಲಾ ಸಹಕಾರ ಯೂನಿಯನ್, ಕೆ.ಸಿ.ಸಿ ಬ್ಯಾಂಕ್ ಧಾರವಾಡ, ಹುಬ್ಬಳ್ಳಿ ತಾಲೂಕಿನ ಎಲ್ಲ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಆರ್ಥಿಕವಾಗಿ ಸಬಲರಾದವರು ಸಹಕಾರ ಸಂಘಗಳಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಸಹಕಾರ ಸಂಘಗಳು ಬಲಿಷ್ಠವಾಗಿ ಮುಂದುವರೆಯಲು ಪ್ರತಿಯೊಬ್ಬರೂ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸಂಘ-ಸಂಸ್ಥೆಗಳ ಬಗ್ಗೆ ಪ್ರೀತಿ, ಕಾಳಜಿಯನ್ನು ಹೊಂದಿರಬೇಕು. ಸಹಕಾರ ರಂಗದಲ್ಲಿ ಹೆಚ್ಚು ಹೆಚ್ಚು ಕೆಲಸಗಳಾಗಬೇಕು. ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಹಿರಿದಾಗಿದೆ ಎಂದರು.

ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಉಮೇಶ ಆರ್.ಹೆಬಸೂರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಹಕಾರ ರತ್ನ ಪುರಸ್ಕೃತರಾದ ಚಂಬಣ್ಣ, ಸುರೇಶ ಬಂಡಿ, ಫಕ್ಕೀರಗೌಡ ಕಲ್ಲನಗೌಡ್ರ, ಉತ್ತಮ ಸಹಕಾರ ಸಂಸ್ಥೆಗಳಾದ ಪ್ರಾಥಮಿಕ ಸಹಕಾರ ಪತ್ತಿನ ಸಂಘ ಛಬ್ಬಿ, ಬ್ಯಾಹಟ್ಟಿ ಮತ್ತು ಕೋಳಿವಾಡ, ಹಾಲು ಉತ್ಪಾದಕ ಸಂಘ ಗಿರಿಯಾಲ, ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್, ಮಹಿಳಾ ಸ್ವ-ಸಹಾಯ ಸಂಘ, ಮಹಾಲಕ್ಷ್ಮೀ ಸಂಘ ಹುಬ್ಬಳ್ಳಿ, ಶ್ರೀ ಗಜಾನನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಹುಬ್ಬಳ್ಳಿ ಮತ್ತು ಅದರೊಂದಿಗೆ ನಿವೃತ್ತ ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಗಂಗಪ್ಪ ಗುರಕ್ಕನವರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಸಿಸಿ ಬ್ಯಾಂಕ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಕಾಸ್ಕಾರ್ಡ್ ಬ್ಯಾಂಕಿನ ಉಪಾಧ್ಯಕ್ಷ ಉಳವಪ್ಪ ದಾಸನೂರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಸುರೇಶ ಬಣವಿ, ಹುಬ್ಬಳ್ಳಿ ಅರ್ಬನ್ ಕೋ-ಆಪ್ ಬ್ಯಾಂಕಿನ ಅಧ್ಯಕ್ಷ ವಿಕ್ರಮ ಶಿರೂರ, ಶ್ರೀ ಗಜಾನನ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಹಿತೇಶಕುಮಾರ ಮೋದಿ, ಮಹಾರಾಜಾ ಅಗ್ರಸೇನಾ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಅಮಿತ ಮಹಾಜನ, ಕೆಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಸ್.ವಿ. ಹೂಗಾರ, ಜಿಲ್ಲಾ ಉಸ್ತುವಾರಿ ಅಧಿಕಾರಿ ಎಂ.ಬಿ. ಪೂಜಾರ, ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಎಸ್. ರೇಣುಕಾ, ವಿ.ಜಿ. ಕುಲಕರ್ಣಿ, ಮಲ್ಲಿಕಾರ್ಜುನ ಸಾವುಕಾರ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು, ಸಂಘಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಡಾ. ರಾಮು ಮೂಲಗಿ ಅವರು ನಾಡಗೀತೆ, ಜಾನಪದ ಹಾಡು ಹಾಡಿದರು. ಈಶ್ವರ ಮತ್ತು ತಂಡದವರು ಡೊಳ್ಳಿನ ಪದ ಪ್ರಸ್ತುತಪಡಿಸಿದರು. ಕೆಸಿಸಿ ಬ್ಯಾಂಕ್‌ನ ಉಪಾಧ್ಯಕ್ಷರಾದ ನಿಂಗನಗೌಡ ಮರಿಗೌಡ್ರ ಸ್ವಾಗತಿಸಿದರು.

ಧಾರವಾಡ ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ಮಲ್ಲಿಕಾರ್ಜುನ ಹೊರಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರ ಸಂಘಗಳ ಸ್ಥಾಪನೆಗೆ ಮುನ್ನುಡಿ ಬರೆದ ಕೀರ್ತಿ ಧಾರವಾಡ ಜಿಲ್ಲೆಗೆ ಸಲ್ಲುತ್ತದೆ. ಆಡುಮುಟ್ಟದ ಸೊಪ್ಪಿಲ್ಲ, ಸಹಕಾರ ಸಂಘವಿಲ್ಲದ ರಂಗವಿಲ್ಲ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ವಿವರಿಸಿದರು.

 


Spread the love

LEAVE A REPLY

Please enter your comment!
Please enter your name here