ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇದ್ದ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ನಡೆದಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಹಿನ್ನೆಲೆಯಲ್ಲಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರುಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.
Advertisement
ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಪ್ರಕಟಣೆ ನೀಡಿದ್ದು, ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಡಿಸೆಂಬರ್ 27 ಮತ್ತು 28ರಂದು ಮರುಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು KEA ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಮೂಲಕ ತಮ್ಮ ಅರ್ಜಿ ಸಲ್ಲಿಸಿರುವ ಹುದ್ದೆಯ ವಿವರಗಳು ಸೇರಿದಂತೆ ಬೇಕಾದ ಮಾಹಿತಿಯನ್ನು ನಮೂದಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸಲಹೆ ನೀಡಲಾಗಿದೆ.


