ವಸಾಯಿ:- ಶಾಲೆಯಲ್ಲಿ ಶಿಕ್ಷಕರು ನೀಡಿದ ಶಿಕ್ಷೆಯಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವಸಾಯಿಯಲ್ಲಿ ನಡೆದಿದೆ.
ಶಾಲೆಗೆ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿನಿಗೆ 100 ಬಸ್ಕಿ ಹೊಡೆಯುವ ಶಿಕ್ಷೆಯನ್ನು ಶಿಕ್ಷಕರು ನೀಡಿದ್ದರು. ಬಳಿಕ ಆಕೆ ಅಸ್ವಸ್ಥಳಾಗಿದ್ದು, ಆಸ್ಪತ್ರೆಗೆ ಕೊಂಡೊಯ್ಯುವಾಗಲೇ ಸಾವನ್ನಪ್ಪಿದ್ದಾಳೆ. ಪ್ರಕರಣದ ತನಿಖೆ ನಡೆಯುತ್ತಿದೆ ಮತ್ತು ಶಾಲಾ ಆಡಳಿತದಿಂದ ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದಿಲೀಪ್ ತಿಳಿಸಿದ್ದಾರೆ.
ಆಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶಾಲಾ ಶಿಕ್ಷಕರು ಮತ್ತು ಇತರ ವಿದ್ಯಾರ್ಥಿಗಳ ಹೇಳಿಕೆಗಳು ಸೇರಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದ ಮೇಲೆ, ಪ್ರಕರಣ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಶಿಕ್ಷಕನನ್ನು ಬಂಧಿಸಲಾಗಿದೆ. ಶಾಲೆಯ ನಿರ್ಲಕ್ಷ್ಯವಿದ್ದರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


