ಹಾಸನ:- ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೇಲೂರು ಪಟ್ಟಣದಲ್ಲಿ ಜರುಗಿದೆ.
Advertisement
ಸ್ಪಂದನ (34) ಮೃತ ಮಹಿಳೆ. ಇವರು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಮಹಿಳೆ ಪತಿಯಿಂದ ದೂರಾಗಿ 8 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು. ಎರಡು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದ್ದನ್ನ ಸ್ಥಳೀಯರು ಗಮನಿಸಿದಾಗ ಈ ಪ್ರಕರಣ ಬಯಲಾಗಿದೆ.
ಮನೆಯ ಬಾಗಿಲು ತೆರೆದಿದ್ದರೂ ಯಾರ ಸುಳಿವು ಇಲ್ಲದೇ ಇದ್ದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಸ್ಪಂದನ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಸಂಪೂರ್ಣ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.
ಕೊಲೆ ಶಂಕೆ ಹಿನ್ನೆಲೆಯಲ್ಲಿ ಬೇಲೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.


