ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರು G20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.21 ರಿಂದ 23 ರ ವರೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ಜಿ20 ನಾಯಕರ ಶೃಂಗಸಭೆ ನಡೆಯಲಿದೆ. ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ, ವಿಪತ್ತು ಅಪಾಯ ಕಡಿತದಲ್ಲಿ ಜಿ20 ಕೊಡುಗೆ, ಹವಾಮಾನ ಬದಲಾವಣೆ ಮತ್ತು ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆಯ ಕುರಿತು ನಡೆಯುವ ಈ ಶೃಂಗಸಭೆಯ ಮೂರು ಅಧಿವೇಶನಗಳಲ್ಲಿ ಪ್ರಧಾನಿ ಮೋದಿ ಮಾತನಾಡುವ ನಿರೀಕ್ಷೆಯಿದೆ.
ಕೆಲವು ನಾಯಕರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ತನ್ನ ಬಿಳಿ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ, ಅಮೆರಿಕ ಶೃಂಗಸಭೆಯನ್ನು ಬಹಿಷ್ಕರಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಹೊತ್ತಿನಲ್ಲೇ, ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾ ಆಯೋಜಿಸುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.


