ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ ಘೋಷಣೆ

0
Spread the love

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

Advertisement

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು. ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.


Spread the love

LEAVE A REPLY

Please enter your comment!
Please enter your name here