ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ: ದೆಹಲಿಗೆ ಹೊರಟ ಡಿಕೆಶಿ ಟೀಂ!

0
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರಕ್ಕಾಗಿ ಕ್ಷಿಪ್ರ ಕ್ರಾಂತಿಯೊಂದು ಆರಂಭವಾಗಿದೆ. ಎರಡೂವರೆ ವರ್ಷ ಪೂರ್ಣಗೊಂಡರೂ ಹೈಕಮಾಂಡ್‌ನಿಂದ ಯಾವುದೇ ನಿರ್ಧಾರ ಬಾರದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬಣ ಸಕ್ರಿಯವಾಗಿದ್ದು,

Advertisement

ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಕೊಡುವಂತೆ ಹೈಕಮಾಂಡ್ ಮೇಲೆ ತೀವ್ರ ಒತ್ತಡ ಹೇರಲು ಆನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ರಂಗನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಎಂಎಲ್ ಸಿ ದಿನೇಶ್ ಗೂಳಿಗೌಡ ದೆಹಲಿ ಯಾತ್ರೆ ಕೈಗೊಂಡಿದ್ದು,

ಇಂದು ಸಂಜೆ ದೆಹಲಿಯಲ್ಲಿ ಎಐಸಿಸಿಎ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಮಾತುಕತೆಗೆ ಮುಂದಾಗಿದ್ದಾರೆ. ಅದಾದ ನಂತರ ನಾಳೆ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್‌ನ ಸಚಿವರು ಮತ್ತು ಶಾಸಕರ ನಿಯೋಗ ಕಾಂಗ್ರೆಸ್‌ನ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ.

ಬಳಿಕ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ  ರಣದೀಪ್ ಸುರ್ಜೇವಾಲಾ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಉಳಿದ ರಾಷ್ಟ್ರೀಯ ನಾಯಕರನ್ನು ನಿಯೋಗ  ಭೇಟಿಯಾಗಲಿದೆ. ಡಿ.ಕೆ.ಶಿವಕುಮಾರ್ ಪರವಾಗಿ ದೆಹಲಿಯಲ್ಲಿ ಧ್ವನಿ ಎತ್ತಲಿದ್ದಾರೆ.


Spread the love

LEAVE A REPLY

Please enter your comment!
Please enter your name here