ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತರಾಜನ್ ಜತ್ತಣ್ಣ ಅವರು ಗದಗ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ರಿಶ್ಚಿಯನ್ ಸಮುದಾಯದ ಸಿಎಸ್‌ಐ ಚರ್ಚ್ ಗದಗ ಸಭಾಭವನದಲ್ಲಿ 2025-26ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ನಿಗಮದ ವಿವಿಧ ಯೋಜನೆಗಳ ಪೋಸ್ಟರ್ ಬಿಡುಗಡೆ ಹಾಗೂ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಕ್ರಿಶ್ಚಿಯನ್ ಸಮುದಾಯದ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Advertisement
ಈ ಸಂದರ್ಭದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಗದಗ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರಾದ ಸಯ್ಯದ್ ಜೊಹೈಬುಲ್ಲಾಹ್, ಸಿಬ್ಬಂದಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕ್ರಿಶ್ಚಿಯನ್ ಸಮುದಾಯದ ಮುಖಂಡರಾದ ಜೊಸೇಫ್ ಜೋಶಿ, ಎಲಿಷ್ ಕುಮಾರ, ರಿಜನಾಲ್ಡ್ ಫೌಂಡ್, ಡೋರಿಟಾ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


