ರಾಷ್ಟ್ರೀಯ ಅಪಸ್ಮಾರ ದಿನಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗ, ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮುಂಡರಗಿಯ ತಾಲೂಕಾ ಆಸ್ಪತ್ರೆ ಸಭಾಭವನದಲ್ಲಿ ರಾಷ್ಟ್ರೀಯ ಅಪಸ್ಮಾರ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಜರುಗಿತು.

Advertisement

ಮುಂಡರಗಿ ತಾಲೂಕಾ ಆರೋಗ್ಯ ಅಧಿಕಾರಿ ಡಾ. ಲಕ್ಷ್ಮಣ ಪೂಜಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೂರ್ಛೆ ರೋಗ/ಅಪಸ್ಮಾರ ಸಮಸ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಕುಟುಂಬ–ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದೆ ಉಳಿಯುತ್ತಿದೆ. ಅಪಸ್ಮಾರದ ಲಕ್ಷಣಗಳನ್ನು ಬೇಗನೆ ಗುರುತಿಸಿ ಚಿಕಿತ್ಸೆ ಪಡೆಯುವಿಕೆ ಹಾಗೂ ತಡೆಗಟ್ಟುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಮುಂಡರಗಿ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನರ ಅಪಸ್ಮಾರ ರೋಗ ಲಕ್ಷಣಗಳು, ಅಪಸ್ಮಾರದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರು. ಕಬಿ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ಪ್ರವೀಣ ರೋಣದ ಅವರು ಕಬಿ ಕಾರ್ಯಕ್ರಮದ ಉದ್ದೇಶಗಳು ಮತ್ತು ಗುರಿಗಳ ಬಗ್ಗೆ ಜಾಗೃತಿ ಮೂಡಿಸಿದರು.

ಕಬಿ ಕಾರ್ಯಕ್ರಮದ ಡಾ. ಅಶ್ವಿನಿ ಎಂ. ಕುರಿಯವರು ಮಾತನಾಡಿ, ಈ ಖಾಯಿಲೆಗೆ ಅನುಗುಣವಾಗಿ ದಿನನಿತ್ಯದ ಚಟುವಟಿಕೆಗಳನ್ನು ಮತ್ತು ವ್ಯಾಯಾಮಗಳನ್ನು ಮಾಡುವುದರ ಜೊತೆಗೆ ಚಿಕಿತ್ಸೆ ಮತ್ತು ದೈಹಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು.

ರವಿ ನಂದ್ಯಾಳ ಸ್ವಾಗತಿಸಿದರು. ಮಂಜುಳಾ ಸಜ್ಜನರ ಕಾರ್ಯಕ್ರಮ ನಿರೂಪಿಸಿದರು. ರೇವಣಸಿದ್ಧಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಡಾ. ನಿತಿನ್ ಸ್ವರೂಪ, ಡಾ. ರವಿ ಕಡಗಾವಿ, ಎನ್‌ಸಿಡಿ ಕಾರ್ಯಕ್ರಮ ಸಂಯೋಜಕರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here