ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ರಾತ್ರೋ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದ ಶ್ರೀರಾಂಪುರ ವ್ಯಾಪ್ತಿಯಲ್ಲಿ ಜರುಗಿದೆ.
Advertisement
ಇತ್ತೀಚೆಗೆ ನಂಜನಗೂಡಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಅದರಂತೆ ತಡರಾತ್ರಿ ಬಂದ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಆರೋಪಿಗಳು, ಕುಡಿದು ಗಾಂಜಾ ಮತ್ತಿನಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ.
ಕಿಡಿಗೇಡಿಗಳನ್ನು ಬಂಧಿಸುವಂತೆ ಕಾರು ಮಾಲೀಕರು ಆಗ್ರಹ ಮಾಡಿದ್ದಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


