ಬೆಂಗಳೂರು:- ನಗರದ ಡೈರಿ ಸರ್ಕಲ್ ಬಳಿ ನಡೆದಿದ್ದ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ನವೀನ್, ನೆಲ್ಸನ್ ಹಾಗೂ ರವಿ ಎಂದು ಗುರುತಿಸಲಾಗಿದೆ. ಬಂಧಿತರಿಂದ 70 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ 70 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದು, ಈವರೆಗೆ 6 ಕೋಟಿ 45 ಲಕ್ಷ ರೂ ಹಣ ಜಪ್ತಿ ಮಾಡಲಾಗಿದೆ. ಇನ್ನು 67 ಲಕ್ಷ ರೂ. ಹಣ ಪತ್ತೆಯಾಗ ಬೇಕಿದೆ. ಸದ್ಯ ಆರೋಪಿಗಳನ್ನು ಬೆಂಗಳೂರಿಗೆ ಕರೆತರುತ್ತಿರುವ ಪೊಲೀಸರು, ಮತ್ತಿಬ್ಬರಿಗಾಗಿ ಶೋಧ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೇಬಲ್ ಸಾಥ್ ನೀಡಿರುವ ಸ್ಫೋಟಕ ಸತ್ಯ ಬಯಲಾಗಿದೆ. ಗೋವಿಂದಪುರ ಠಾಣೆ ಕಾನ್ಸ್ಟೇಬಲ್ ಅಣ್ಣಪ್ಪ, ಸಿಎಂಎಸ್ ಕಂಪನಿ ಹಳೆ ಉದ್ಯೋಗಿ ಕ್ಸೇವಿಯರ್, ಸಿಎಂಎಸ್ ವಾಹನ ವಿಭಾಗದ ಮೇಲ್ವಿಚಾರಕ ಗೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು. ಘಟನೆ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


