ಮಂಡ್ಯ: ತೆರದ ಬಾವಿಯಲ್ಲಿ ವಿದ್ಯಾರ್ಥಿ ಮೃತ ದೇಹ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಹಳೇಸಿದ್ದರಹಳ್ಳಿ ನಿವಾಸಿ ಕರಣ್ ಎಸ್ (22) ಮೃತ ವಿದ್ಯಾರ್ಥಿಯಾಗಿದ್ದು,
ಶ್ರವಣ ಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ ಬೈಕ್ ಮತ್ತು ಮೊಬೈಲ್ ಸಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಘಟನೆಯು ಹಲವು ಸಂಶಯಗಳಿಗೆ ಕಾರಣವಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ನಂತರ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಲಾಯಿತು. ಇದು ಆತ್ಮ೧ಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ


