ಬೆಳಗಾವಿ: ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ.
ಮೊದಲ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ ಎಂದರು.
ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೈಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಎಲ್ಲರಿಗೂ ಅಧಿಕಾರ ಸಿಗಬೇಕು. ಡಾ.ಜಿ.ಪರಮೇಶ್ವರ್ ಅವರು 7 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರು ಬಹಳಷ್ಟು ಕಾರ್ಯಕ್ರಮ ಮಾಡಿದ್ದರು ಎಂದು ಹೇಳಿದರು.


