ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು.
Advertisement
ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.


