ಮುಂಬೈ: ಟೀಂ ಇಂಡಿಯಾದ ಪ್ರಮುಖ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನಾ ವಿವಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರಾದ ಸಾಂಗ್ಲಿಯಲ್ಲಿ ಇಂದು ಮದುವೆ ಸಮಾರಂಭ ನಡೆಯುತ್ತಿತ್ತು.
Advertisement
ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಮೃತಿ ಮಂಧಾನಾ ತಂದೆ ಶ್ರೀನಿವಾಸ್ ಅರಿಗೆ ಲಘು ಹೃದಯಾಘಾತ ಉಂಟಾಗಿದ್ದು, ತಕ್ಷಣವೇ ಕಾರ್ಯಕ್ರಮ ಸ್ಥಳಕ್ಕೆ ಆಂಬುಲೆನ್ಸ್ ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯಕ್ಕೆ ಒಳಗಾದ ಬೆನ್ನಲ್ಲೇ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಅಂಬುಲೆನ್ಸ್ ಬಂದು ಶ್ರೀನಿವಾಸ್ ಅವರನ್ನು ಕರೆದುಕೊಂಡು ಹೋಗಿದೆ.
ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.


