ಕೋಲಾರ:- ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ಇರುವ ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
Advertisement
ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತರು. ಇವರು ಚೆನ್ನೈ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


