ನೆಲಮಂಗಲ:- ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಜರುಗಿದೆ.
21 ವರ್ಷದ ದೇವಿಶ್ರೀ ಮೃತ ಯುವತಿ. ಆಂಧ್ರ ಮೂಲದವರಾದ ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜೊತೆ ಸ್ನೇಹಿತೆ ರೂಂಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿ ಯುವಕ ಓರ್ವನೇ ವಾಪಸ್ ಆಗಿದ್ದಾನೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪ್ರೇಮ್ ವರ್ಧನ್‌ಗೆ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಸದ್ಯ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಆಸ್ಪತ್ರೆಯ ಶವಗಾರದ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.



