ಫಲಿಸದ ಚಿಕಿತ್ಸೆ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ವಿಧಿವಶ!

0
Spread the love

90 ವರ್ಷದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ವಿಧಿವಶರಾಗಿದ್ದಾರೆ.

Advertisement

ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರು ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅನೇಕ ಬಾಲಿವುಡ್‌ ತಾರೆಯರು ಅವರನ್ನ ಭೇಟಿ ಮಾಡಲು ಆಸ್ಪತ್ರೆಗೆ ಧಾವಿಸಿದ್ದರು.

ಇದಾದ ಬಳಿಕ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ, ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲು ಕುಟುಂಬ ನಿರ್ಧರಿಸಿತ್ತು. ಬಾಲಿವುಡ್ ನಲ್ಲಿ ಸೂಪರ್ ಸ್ಟಾರ್ ಹಾಗೂ ಸೂಪರ್ ಹಿಟ್ ಸಿನಿಮಾಗಳನ್ನ ನೀಡಿ ಮೆರೆದಿದ್ದ ಧರ್ಮೇಂದ್ರ ಅವರು ದಶಕಗಳ ಕಾಲ ಸಿನಿಮಾ ರಂಗವನ್ನ ಆಳಿದ್ದರು ಅಂದ್ರೂ ತಪ್ಪಾಗಲಾರದು. ಸಿನಿಮಾ ರಂಗಕ್ಕೆ ಇವರು ನೀಡಿರುವ ಕೊಡುಗೆ ಅಪಾರ, ಇದಕ್ಕೆ ಸಾಕ್ಷಿ ಎನ್ನುವಂತೆ ತನ್ನ ಸಿನಿರಂಗದ ಪ್ರಯಾಣದಲ್ಲಿ ಏನೆಲ್ಲಾ ಅಂದರೂ ಕೂಡ 300ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.


Spread the love

LEAVE A REPLY

Please enter your comment!
Please enter your name here