ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಸಿ.ಎಸ್. ಶಿವನಗೌಡ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಕಲಚೇತನ ಮಕ್ಕಳ ಹಕ್ಕುಗಳಿಗೆ ಚ್ಯುತಿ ಬರದಂತೆ ಎಚ್ಚರ ವಹಿಸಿ, ಕಾನೂನಿನ ಅಡಿಯಲ್ಲಿ ಸಿಗುವ ಕಾನೂನು ನೆರವು, ಕಾನೂನಿನ ಮೂಲಕ ನಿಮಗೆ ಸಿಗುವ ಸಹಾಯ-ಸಹಕಾರವನ್ನು ಕಾನೂನು ಪ್ರಾಧಿಕಾರದಿಂದ ನೀಡಲಾಗುತ್ತದೆ. ವಿಕಲಚೇತನ ಮಕ್ಕಳಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ ಕರೆ ನೀಡಿದರು.

Advertisement

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ `ವಿಶ್ವ ವಿಕಲಚೇತನರ ದಿನಾಚರಣೆ-2025’ರ ಪ್ರಯುಕ್ತ ವಿಕಲಚೇತನರಿಗಾಗಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ವಿಕಲಚೇತನರ ಕಲ್ಯಾಣಾಧಿಕಾರಿ ಮಾಂತೇಶ ಕೆ ಮಾತನಾಡಿ, ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗವಾಗಿದೆ. ಎಮ್.ಆರ್ ಮಕ್ಕಳು ಅವಲಂಬಿತರಾಗಬಾರದು. ಸ್ಕಿಲ್ ಬೇಸ್ ತರಬೇತಿಯಿಂದ ನೀವು ಸ್ವಾವಲಂಬಿಗಳಾಗಬೇಕು. ಇಂತಹ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪಾಲಕರ, ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿದೇಶಕ ಆರ್.ಎಸ್. ಬುರಡಿ ಮುಂತಾದವರು ಇದ್ದರು.


Spread the love

LEAVE A REPLY

Please enter your comment!
Please enter your name here