ಶಾಲೆಯ ಅಭಿವೃದ್ಧಿಗೆ ಕೈಜೋಡಿಸಲು ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ವಾರ್ಡ್ ನಂ. 6ರಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.1 1872ನೇ ಇಸ್ವಿಯಲ್ಲಿ ಆರಂಭಗೊಂಡ ಶಾಲೆಯಾಗಿದ್ದು, ಲಕ್ಷ್ಮೇಶ್ವರದ ಪ್ರಥಮ ಶಾಲೆ ಎನ್ನುವ ಹೆಗ್ಗಳಿಕೆ ಪಡೆದಿದೆ. ಈ ಶಾಲೆ ಇನ್ನೂ ಅನೇಕ ಸೌಲಭ್ಯಗಳ ಕೊರತೆ ಅನುಭವಿಸುತ್ತಿದ್ದು, ಶಾಸಕರು ತಮ್ಮ ಶಾಸಕರ ನಿಧಿ ಅಥವಾ ಸಿಎಸ್‌ಆರ್ ಫಂಡ್‌ನಿಂದ ವಿಶೇಷ ಅನುಧಾನವನ್ನು ಒದಗಿಸಿ ಶಾಲೆಯ ಅಭಿವೃದ್ಧಿಗೆ ನೆರವಾಗಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಎಸ್‌ಡಿಎಂಸಿ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸೋಮವಾರ ಮನವಿ ಅರ್ಪಿಸಿದರು.

Advertisement

ಈ ವೇಳೆ ಮಾತನಾಡಿದ ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಶಿರಬಡಗಿ ಮತ್ತು ಶಂಕರ ಬ್ಯಾಡಗಿ, 153 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ, ಇತಿಹಾಸದ ಪುಟಗಳಲ್ಲಿ ಮರೆಯಲಾರದ ಶಾಲೆ ಇದಾಗಿದೆ. ಈ ಶಾಲೆಯಲ್ಲಿ ಅಧ್ಯಯನ ಮಾಡಿದ ಸಾವಿರಾರು ವಿದ್ಯಾರ್ಥಿಗಳು ಇಂದು ನಾಡಿನ ಪ್ರಸಿದ್ಧ ವ್ಯಕ್ತಿಗಳಾಗಿದ್ದಾರೆ. ಇಲ್ಲಿ ಕಲಿತ ಅನೇಕರು ಇಂದು ನಾಡಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಇದೀಗ ಈ ಶಾಲೆಯನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಅನೇಕ ದಾನಿಗಳು ಕೊಡುಗೆಗಳನ್ನು ನೀಡಿದ್ದಾರೆ. ಇನ್ನೂ ಕೆಲವೊಂದು ಸುಧಾರಣೆಗಳನ್ನು ಮಾಡುವ ದೃಷ್ಟಿಯಿಂದ ಶಾಸಕರ ಅನುದಾನ ಅಥವಾ ಸಿಎಸ್‌ಆರ್ ಫಂಡ್‌ನಿಂದ ಅನುದಾನ ಒದಗಿಸಿ, ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಡಿ.ಎನ್. ದೊಡ್ಡಮನಿ, ಬಸವರಾಜ ಚಕ್ರಸಾಲಿ, ಗಂಗಾಧರ ಮೆಣಸಿನಕಾಯಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here