ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಇಬ್ಬರು ಬಡ ರೈತರ 10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳವನ್ನು ರಾತ್ರಿ ಸಮಯದಲ್ಲಿ ದುಷ್ಕರ್ಮಿಗಳು ಹಾಳು ಮಾಡಿದ್ದರು. ಈ ಕೃತ್ಯವನ್ನು ಖಂಡಿಸಿ ಹಾಗೂ ನೊಂದ ರೈತರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿ ಬಣದ ಮುಂಡರಗಿ ತಾಲೂಕಿನ ಮಹಿಳಾ ಅಧ್ಯಕ್ಷರಾದ ನಾಗವೇಣಿ ಕುಡುಪಲಿ ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಿರೇಮಠ ಹಾರೂಗೇರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯವನ್ನು ತುಂಬಿ, ಮುಂಡರಗಿ ತಾಲೂಕು ಹಸಿರು ಸೇನೆಯಲ್ಲಿಿಂದ ಧನಸಹಾಯವನ್ನು ಮಾಡಿದರು. ಈ ಸಂದರ್ಭದಲ್ಲಿ ಮುಂಡರಗಿ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.



