ಚಿನ್ನದ ವ್ಯಾಪಾರಿ ಬಳಿ ದರೋಡೆ: ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಬಂಧನ

0
Spread the love

ದಾವಣಗೆರೆ:- ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ಅರೆಸ್ಟ್ ಮಾಡುವಲ್ಲಿ ಪೋಲೀಸರು ಯಶಸ್ವಿ ಆಗಿದ್ದಾರೆ.

Advertisement

ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಬಂಧಿತ ಪಿಎಸ್‍ಐಗಳು. ಈ ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಪಿಎಸ್‍ಐಗಳಿಗೆ ವ್ಯಾಪಾರಿ ಬಳಿ ಚಿನ್ನ ಇರುವುದರ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ.

ಇಬ್ಪಿಬರು ಎಸ್‌ಐಗಳು ವರ್ಗಾವಣೆ ಆಗಿ ಐಜಿ ಅಫೀಸ್‌ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ನಾವು ಐಜಿ ಸ್ಕ್ವಾಡ್ ಎಂದು ಹೇಳಿ ಹೆದರಿಸಿದ್ದರು. ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದು, ಒಳಗೆ ಹೋಗದೆ ವಾಪಸ್ ಕರೆತಂದಿದ್ದರು. ಬಳಿಕ ವ್ಯಾಪಾರಿಯ ಬಳಿ ಇದ್ದ ಬಂಗಾರವನ್ನು ಕಸಿದುಕೊಂಡು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು.

ಬಂಗಾರ ಕಳೆದುಕೊಂಡ ವ್ಯಾಪಾರಿ ಕೆಟೆಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಕೆಟಿಜೆ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here