ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ.
ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಪ್ರಧಾನಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾಥ್ ನೀಡಿದರು.
ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ಆರತಿ ಬೆಳಗಿದರು. ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಿದರು.



