ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ದಿನದ ಅಂಗವಾಗಿ `ಸಂವಿಧಾನ ಬಚಾವೋ ದಿವಸ್’ ಆಚರಣೆ ಕಾರ್ಯಕ್ರಮ ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನ. 26ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಭಾಗವಹಿಸುವರು.
ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ, ಪಿ.ಎಲ್.ಡಿ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐಟಿ ಮತ್ತು ಡೇಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ವಿನಂತಿಸಿದ್ದಾರೆ.
ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಬಿ. ಅಸೂಟಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.



