ಹಾವೇರಿ:- ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ.
ಗ್ರಾಮದ ರೈತ ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ. ಶಂಕರಗೌಡರ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿದೆ. ಕಳೆದ ವರ್ಷ ಸಹ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ವರ್ಷ ಎರಡನೇ ಬಾರಿಗೆ ರೈತ ಶಂಕರಗೌಡರ ತೋಟದ ಮನೆ ಮುಂದೆ ಕಾಣಿಸಿಕೊಂಡು ಆಂತಕ ಸೃಷ್ಟಿಯಾಗಿದೆ.
ಒಂದೇ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿರುವುದಕ್ಕೆ ರೈತ ಕುಟುಂಬ ಹಾಗೂ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



