ಬೆಂಗಳೂರು:- ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಮುಗಿಯುವ ಲಕ್ಷಣ ಕಾಣ್ತಿಲ್ಲ. ಒಂದೆಡೆ ಸಿದ್ದು ಬಣ, ಮತ್ತೊಂದೆಡೆ ಡಿಕೆಶಿ ಬಣ.. ಹೀಗೆ ಬಣಗಳಾಗಿ ರೂಪುಗೊಂಡಿರುವ ಕಾಂಗ್ರೆಸ್ ನಲ್ಲಿ ಎಲ್ಲವೂ ಅಸ್ಪಷ್ಟವಾಗಿದೆ.

ಇದೀಗ ಡಿಕೆಶಿ ಮಾಡಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹುಟ್ಟುಹಾಕಿದೆ. ʻಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿʼ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಟ್ ಕೊಟ್ಟಂತಿದೆ.
ಹೌದು. ಇಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ, `Word Power Is World Power’ ಎಂದು ಪೋಸ್ಟ್ ಹಾಕಿದ್ದಾರೆ. ನಿನ್ನೆಯೂ ಡಿಸಿಎಂ ಡಿಕೆ ಶಿವಕುಮಾರ್ ಇದೇ ಮಾತನ್ನ ವೇದಿಕೆಯಲ್ಲಿ ಹೇಳಿದ್ದರು. ಮತ್ತೆ ಇದೇ ಪದವನ್ನು ಪೋಸ್ಟ್ ಮಾಡಿರುವುದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೇ ಹೇಳಿದಂತಿದೆ.
ಒಮ್ಮೆ ಕೊಟ್ಟ ಮಾತನ್ನ ಉಳಿಸಿಕೊಳ್ಳುವುದು ಜಗತ್ತಿನ ಅತಿದೊಡ್ಡ ಶಕ್ತಿ. ನನ್ನನ್ನೂ ಸೇರಿದಂತೆ ಅದು ನ್ಯಾಯಾಧೀಶರಾಗಿರಲಿ, ರಾಷ್ಟ್ರಪತಿಯಾಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಎಲ್ಲರೂ ನುಡಿದಂತೆ ನಡೆಯಬೇಕು ಎಂದು ಮಾತಿನ ಚಾಟಿ ಬೀಸಿದ್ದಾರೆ.



