ಬೆಂಗಳೂರು:- ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನ ಜೋರಾಗಿದೆ. ಈ ಕದನ ಸಧ್ಯಕ್ಕೆ ನಿಲ್ಲೋ ಹಾಗೆ ಕಾಣ್ತಿಲ್ಲ.
ಇಂದು ಬೆಳಿಗ್ಗೆ ಅಷ್ಟೆ ಡಿಸಿಎಂ ಡಿಕೆ ಶಿವಕುಮಾರ್ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಸಾಮಾಜಿಕ ಜಾಲತಾಣ ಸೇರಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿತ್ತು.
ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ನೀಡಿದ ನಮ್ಮ ಮಾತು ಕೇವಲ ಇದು ಘೋಷಣೆಯಲ್ಲ. ನಮಗೆ ಇದು ಜಗತ್ತನ್ನು ಅರ್ಥೈಸುತ್ತದೆ ಎಂದು ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಶಕ್ತಿ ಯೋಜನೆಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದರೂ ಡಿಕೆ ಶಿವಕುಮಾರ್ ಅವರನ್ನೇ ಉಲ್ಲೇಖಿಸಿಯೇ ತಿರುಗೇಟು ನೀಡಿದ್ದಾರೆ.
ಒಟ್ಟಾರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಕುರ್ಚಿ ಕಿತ್ತಾಟ ಈಗ ಬೀದಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಪರಸ್ಪರ ಪೋಸ್ಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.



