ಮಂಗಳೂರು:– ಇಂದು ಉಡುಪಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಸಚಿವ ದಿನೇಶ್ ಗುಂಡೂರಾವ್ ಅವರು ಸ್ವಾಗತಿಸಿ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮೋದಿಗೆ ವಿಶೇಷ ಮನವಿ ಸಲ್ಲಿಸಿದ್ದಾರೆ.
ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು. ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು X ನಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 2,400 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 8,768 ರೂ.ರಂತೆ ಒSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 1,600-1,800 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 5,400 ರೂ. ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ, ಭಾರತ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ಕೆಳಗಿನಂತೆ, ದರ ನಿಗದಿ ಮಾಡುವಂತೆ ವಿನಂತಿ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.



