ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಹಾಗೂ ಮುಂಡರಗಿಯ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಬಸವರಾಜ ಯರನಾಳ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.



