HomeDharwadಆಕ್ಷೇಪಣೆಗಾಗಿ ಡಿ. 10ರವರೆಗೆ ಕಾಲಾವಕಾಶ

ಆಕ್ಷೇಪಣೆಗಾಗಿ ಡಿ. 10ರವರೆಗೆ ಕಾಲಾವಕಾಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ನವೆಂಬರ್ 25ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 10ರವರೆಗೆ ಕಾಲಾವಕಾಶ ಇದೆ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ 13,917 ಪುರುಷರು, 10,852 ಮಹಿಳೆಯರು ಸೇರಿ ಒಟ್ಟು 24,769 ಮತದಾರರು ಇದ್ದಾರೆ. ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ಅಂತರ್ಜಾಲ https://ceokarnataka.kar.nic.in ನಲ್ಲಿ, ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧಿಕೃತ ಅಂತರ್ಜಾಲದಲ್ಲಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳವರ ಅಧಿಕೃತ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.

ಸದರಿ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10ರವರೆಗೆ ಕಾಲಾವಕಾಶವಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು, ಅರ್ಹ ಮತದಾರರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಲಿಖಿತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಗೊತ್ತುಪಡಿಸಿದ ಅಧಿಕಾರಿಗಳಿಗೆ, ತಹಸೀಲ್ದಾರ ಕಚೇರಿ ಅಥವಾ ಮಹಾನಗರ ಪಾಲಿಕೆಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!