ತುಮಕೂರು:- ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿಯ ಹಾರೇನಹಳ್ಳಿ ಗೇಟ್ ಬಳಿ ಜರುಗಿದೆ.
Advertisement
ರಮೇಶ್ (43) ಮೃತ ಬೈಕ್ ಸವಾರ. ಇವರು ಮಧುಗಿರಿಯ ಯಲ್ಕೂರು ನಿವಾಸಿ ಎನ್ನಲಾಗಿದೆ. ಕೆ ಎಸ್ ಆರ್ ಟಿ ಬಸ್ ಪಾವಗಡ ದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಸ್ಥಳಕ್ಕೆ ಸ್ಥಳೀಯ ಮಧುಗಿರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ಸ್ಥಳಾಂತರ ಮಾಡಲಾಗಿದೆ.
ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


