• About
  • Advertise
  • Privacy & Policy
  • Contact
Tuesday, November 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್

Vijaya Sakshi News Desk by Vijaya Sakshi News Desk
December 1, 2025
in Karnataka News
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ
0
SHARES
2
VIEWS
Share on Facebook

ಬೆಂಗಳೂರು: “ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, “ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು.

ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ” ಎಂದು ವಿವರಿಸಿದರು.

ನ್ಯಾಷನಲ್ ಹೆರಾಲ್ಡ್ ಅವರ ವೈಯಕ್ತಿಕ ಆಸ್ತಿಯಲ್ಲ, ಪಕ್ಷದ ಆಸ್ತಿ

“ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದ ಪಾಲಕರು ಅವರಾಗಿದ್ದಾರೆ. ಇಲ್ಲಿ ಅನೇಕ ಸದಸ್ಯರುಗಳು ಇದ್ದಾರೆ. ಮೊರಾರ್ಜಿ ಅವರು, ಅಹ್ಮದ್ ಪಟೇಲ್ ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಾಗಿತ್ತು.

ಕೇಸರಿ ಅವರ ಕಾಲದಲ್ಲಿ ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗ, ಕಾಂಗ್ರೆಸ್ ಪಕ್ಷದ ನಾಯಕರಾದ ನಾವುಗಳು ಸೋನಿಯಾ ಗಾಂಧಿ ಅವರ ಮುಂದೆ ಹೋಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಬೇಡಿಕೊಂಡೆವು. ಅವರು ನೇತೃತ್ವ ವಹಿಸಿದ ನಂತರ ನಮ್ಮ ಪಕ್ಷ ದೇಶದ ಅತ್ಯುತ್ತಮ ಆರ್ಥಿಕ ತಜ್ಞರ ಮುಂದಾಳತ್ವದಲ್ಲಿ 10 ವರ್ಷ ಆಡಳಿತ ನಡೆಸಿದೆ. ಈಗ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ.

ಇತಿಹಾಸ ಮರುಕಳಿಸಲಿದೆ. ಅವರು ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಿದರೂ ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಈ ದ್ವೇಷ ರಾಜಕಾರಣ ಸರಿಯಲ್ಲ. ಇದರಿಂದ ಅವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕೇಂದ್ರಕ್ಕೆ ಹೇಳಲು ಬಯಸುತ್ತೇನೆ. ಇದು ಕೇಂದ್ರ ಸರ್ಕಾರದ ನೈತಿಕತೆಯನ್ನಷ್ಟೇ ಕುಗ್ಗಿಸಲಿದೆ. ರಾಜಕೀಯವನ್ನು ನೇರಾನೇರವಾಗಿ ಜನರ ಮಧ್ಯೆ ಮಾಡೋಣ. ಚುನಾವಣೆಯಲ್ಲಿ ಹೋರಾಡೋಣ. ಆದರೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಈ ರೀತಿ ಕಿರುಕುಳ ನೀಡುವುದು ಸರಿಯಲ್ಲ” ಎಂದು ತಿಳಿಸಿದರು.

Tags: BreakingdkshivakumarkannadanewsKarnatakaNewsHeadlinesVijayasakshivijayasakshinews
ShareSendShare
Previous Post

ಕೆಂಗಲ್ ಹನುಮಂತಯ್ಯ ಪುಣ್ಯತಿಥಿ: ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಎಂ ಸಿದ್ದರಾಮಯ್ಯ ಗೌರವ

Next Post

ಸಿಂಪಲ್‌ ಆಗಿ ದೇವಸ್ಥಾನದಲ್ಲಿ ಮದುವೆಯಾದ ನಟಿ ಸಮಂತಾ: ಫೋಟೋ ನೋಡಿ ಶಾಕ್‌ ಆದ ಫ್ಯಾನ್ಸ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಿಂಪಲ್‌ ಆಗಿ ದೇವಸ್ಥಾನದಲ್ಲಿ ಮದುವೆಯಾದ ನಟಿ ಸಮಂತಾ: ಫೋಟೋ ನೋಡಿ ಶಾಕ್‌ ಆದ ಫ್ಯಾನ್ಸ್

ಸಿಂಪಲ್‌ ಆಗಿ ದೇವಸ್ಥಾನದಲ್ಲಿ ಮದುವೆಯಾದ ನಟಿ ಸಮಂತಾ: ಫೋಟೋ ನೋಡಿ ಶಾಕ್‌ ಆದ ಫ್ಯಾನ್ಸ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮಹದಾಯಿ ವಿವಾದ: ಗೋವಾ ಸಿಎಂ ಹೇಳಿಕೆ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಆಕ್ರೋಶ

ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್; ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

November 24, 2026
ಸಾಕ್ಷಿಗೆ ಬೆದರಿಕೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಶಾಕ್: ಪಟ್ಟಣಗೆರೆ ಶೆಡ್ʼನ ಇಬ್ಬರು ಕೆಲಸಗಾರರು ಕೋರ್ಟ್ʼನಲ್ಲಿ ಉಲ್ಟಾ

November 24, 2026
ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

November 24, 2026
ಉತ್ತರ ಪ್ರದೇಶದಲ್ಲಿ ನಕಲಿ ಪನ್ನೀರ್ ಘಟಕದ ಮೇಲೆ ದಾಳಿ: ಲೀಟರ್ ಗಟ್ಟಲೆ ಪಾಮ್ ಆಯಿಲ್ ವಶ

ಉತ್ತರ ಪ್ರದೇಶದಲ್ಲಿ ನಕಲಿ ಪನ್ನೀರ್ ಘಟಕದ ಮೇಲೆ ದಾಳಿ: ಲೀಟರ್ ಗಟ್ಟಲೆ ಪಾಮ್ ಆಯಿಲ್ ವಶ

November 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮಹದಾಯಿ ವಿವಾದ: ಗೋವಾ ಸಿಎಂ ಹೇಳಿಕೆ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಆಕ್ರೋಶ

ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್; ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

November 24, 2026
ಸಾಕ್ಷಿಗೆ ಬೆದರಿಕೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಶಾಕ್: ಪಟ್ಟಣಗೆರೆ ಶೆಡ್ʼನ ಇಬ್ಬರು ಕೆಲಸಗಾರರು ಕೋರ್ಟ್ʼನಲ್ಲಿ ಉಲ್ಟಾ

November 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper