ಬೆಂಗಳೂರು: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಬ್ರೇಕ್‌ಫಾಸ್ಟ್ ಮೀಟಿಂಗ್ ಸೇರಿದ್ದು, ಇಬ್ಬರು ಮಾತನಾಡೋಕೆ. ರಾಜಕಾರಣಿಗಳು ಒಟ್ಟಿಗೆ ಸೇರೋದು ಮಾತನಾಡೋಕೆ. ಅದು ರಾಜಕೀಯ ಇರಬಹುದು, ಮತ್ತೇನೇ ಇರಬಹುದು. ಆದರೆ, ಬ್ರೇಕ್‌ಫಾಸ್ಟ್ ಮೀಟಿಂಗ್ ಮೂಲಕ ಕೆಲವು ವಿಚಾರಗಳನ್ನ ಬಗೆಹರಿಸಿದ್ದಾರೆ ಎಂದರು.
ರಾಜ್ಯದಲ್ಲಿ ಪವರ್ ಶೇರಿಂಗ್ ಗೊಂದಲದ ಬಗ್ಗೆ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿ ತೆರೆ ಎಳೆದಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು. ಒಕ್ಕಲಿಗ ಸಮಾಜ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಅದನ್ನೇ ಸ್ವಾಮೀಜಿ ಅವರು ಹೇಳುತ್ತಿದ್ದಾರೆ, ಯಾರು ಏನೇ ಹೇಳಿದರೂ ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.



