• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಸಮರ್ಪಕ ಭೂದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ: ಡಿ.ಕೆ. ಶಿವಕುಮಾರ್

Vijaya Sakshi News Desk by Vijaya Sakshi News Desk
December 1, 2025
in Karnataka News
ಅಸೂಯೆಗೆ ಮದ್ದಿಲ್ಲ, ಪಾಪ ಕುಮಾರಸ್ವಾಮಿಗೆ ತಡೆದುಕೊಳ್ಳಲು ಆಗ್ತಿಲ್ಲ; ಡಿಕೆ ಶಿವಕುಮಾರ್​
0
SHARES
1
VIEWS
Share on Facebook

ಬೆಂಗಳೂರು: “ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನರೆಗಾ ಯೋಜನೆ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ, ಇದರಿಂದ ನಮ್ಮ ಸರ್ಕಾರಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ. ನಾವು ಜನರ ಹೃದಯಕ್ಕೆ ಹತ್ತಿರವಾಗುತ್ತೇವೆ ಎಂದು ಇದಕ್ಕೆ ಅನುದಾನ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ನರೇಗಾ ಯೋಜನೆಯಡಿ 2021ರಲ್ಲಿ 14.65 ಕೋಟಿ ಮಾನವ ಕೂಲಿ ದಿನಗಳಿಗೆ ಅವಕಾಶವಿತ್ತು. ಈ ವರ್ಷ ಅದನ್ನು 9 ಕೋಟಿಗೆ ಇಳಿಸಿದ್ದಾರೆ. ಸುಮಾರು 40% ಕಡಿಮೆ ಮಾಡಿದ್ದಾರೆ. ನರೇಗಾ ಯೋಜನೆಯಡಿ 2021ರಲ್ಲಿ 5,910 ರೂ. ಕೋಟಿ ಅನುದಾನ ಬಂದಿತ್ತು. ಈ ವರ್ಷ 2,691 ಕೋಟಿ ರೂ. ಅನುದಾನ ಬಂದಿದೆ. ಈ ಯೋಜನೆಯಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂದು ನೀವೆಲ್ಲರೂ ಗಮನಿಸಬೇಕು” ಎಂದು ತಿಳಿಸಿದರು.

“ಜಲಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ 45% ಅನುದಾನ ನೀಡಬೇಕು. 10% ಹಣವನ್ನು ಜನರಿಂದ ಪಡೆಯುವುದಾಗಿದೆ. ಕಳೆದ ವರ್ಷ ಈ ಯೋಜನೆಗೆ ರಾಜ್ಯ ಸರ್ಕಾರ 3700 ಕೋಟಿ ರೂ. ಅನ್ನು ನೀಡಿದರೆ, ಕೇಂದ್ರ ಸರ್ಕಾರ ನೀಡಿರುವ ಅನುದಾನ ಈವರೆಗೂ ಶೂನ್ಯ” ಎಂದು ತಿಳಿಸಿದರು.

“ಗ್ರಾಮೀಣಾಭಿವೃದ್ಧಿ ಇಲಾಖೆಯ 25 ಸಾವಿರ ಕೋಟಿ ಅನುದಾನದಲ್ಲಿ ಜಲಜೀವನ್ ಮಿಷನ್ ಗೆ 12 ಸಾವಿರ ಕೋಟಿ, ನರೇಗಾ ಯೋಜನೆಗೆ 2,400 ಕೋಟಿ, ಗ್ರಾಮಗಳ ರಸ್ತೆಗೆ 1,000 ಕೋಟಿ, ಸಿಎಂ ಮೂಲಭೂತ ಸೌಕರ್ಯಕ್ಕೆ 900 ಕೋಟಿ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲ್ಯಾಣ ಪಥ ಯೋಜನೆ ಜಾರಿ ಮಾಡಿದ್ದಾರೆ” ಎಂದರು.

“ಇದೊಂದು ಐತಿಹಾಸಿಕ ಕಾರ್ಯಕ್ರಮ. ಶುಭ ಗಳಿಗೆಯಲ್ಲಿ ನಾವು ಸೇರಿದ್ದೇವೆ. ನಮ್ಮ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡಿದ್ದು, ನಾವು ಭೂಮಿ ಮೇಲೆ ಹುಟ್ಟಿ, ಸತ್ತ ನಂತರ ಭೂಮಿಯ ಒಳಗೆ ಸೇರುತ್ತೇವೆ. ಆದರೆ ಬದುಕಿದ್ದಾಗ ನಾವು ಮಾಡಿದ ಸಾಧನೆ ಮಾತ್ರ ಭೂಮಿಯ ಮೇಲೆ ಉಳಿದುಕೊಳ್ಳುತ್ತದೆ. ಈ ಹಸ್ತ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿ ನೂರು ವರ್ಷಗಳು ತುಂಬಿದೆ. ಅಂದು ಗಾಂಧೀಜಿ ಅವರು ವಹಿಸಿಕೊಂಡ ಜವಾಬ್ದಾರಿ ಸ್ಥಾನದಲ್ಲಿ ಇಂದು ನಮ್ಮದೇ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ” ಎಂದರು.

ಇ-ಸ್ವತ್ತು ಮೂಲಕ ನಿಮ್ಮ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ:

“ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ತಿಳಿಸಿದ್ದರು. ಪ್ರತಿ ಹಳ್ಳಿಯಲ್ಲಿ ಪಂಚಾಯ್ತಿ, ಸೊಸೈಟಿ, ಶಾಲೆ ಇರಬೇಕು ಎಂದು ಮಾರ್ಗದರ್ಶನ ನೀಡಿದರು. ಅವರ ಮಾರ್ಗದರ್ಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮನೆ ಬಾಗಿಲಿಗೆ ಇ-ಸ್ವತ್ತು ತಂದುಕೊಡುವ ಕೆಲಸ ಮಾಡುತ್ತಿದ್ದೇವೆ.

ಇದು ನಿಮ್ಮೆಲ್ಲರ ಬದುಕಿಗೆ ಹೊಸರೂಪ ನೀಡಿ, ಎಲ್ಲ ಪಂಚಾಯ್ತಿ ಆಸ್ತಿ ದಾಖಲೆಗಳಿಗೆ 11 ಬಿ ಖಾತೆಗಳನ್ನು ನೀಡಲಾಗುತ್ತಿದೆ. ನೀವು ಅರ್ಜಿ ಹಾಕಿ 15 ದಿನದ ಒಳಗೆ ಖಾತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಯಾರೂ ಕಚೇರಿ ಅಲೆಯುವುದು ಬೇಡ ಎಂದು ಆನ್ಲೈನ್ ಹಾಗೂ ಬಾಪುಜಿ ಕೇಂದ್ರಗಳಲ್ಲಿ ವಿತರಣೆಗೆ ಅವಕಾಶ ನೀಡಲಾಗಿದೆ. 11 ಬಿ ಮೂಲಕ ತೆರಿಗೆ ಪಾವತಿಸಿ, ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ” ಎಂದು ತಿಳಿಸಿದರು.

ಭೂ ದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ:

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ ಯೋಜನೆಯಾಗಿದೆ.

ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳನ್ನು ಇ ಖಾತಾ ಅಭಿಯಾನ ಮಾಡಿದ್ದು, 6 ಲಕ್ಷ ಜನರಿಗೆ ಇ ಖಾತಾ ವಿತರಿಸಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಕೃಷ್ಣ ಬೈರೇಗೌಡರು ಹಾಗೂ ಪ್ರಿಯಾಂಕ್ ಖರ್ಗೆ ಅವರು ಸೇರಿ 1,11,111 ಜನರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಹೊರಗಿರುವ ತಾಂಡಾಗಳನ್ನು ಸಕ್ರಮ ಮಾಡಿ ಹಕ್ಕುಪತ್ರ, ಭೂ ದಾಖಲೆಗಳನ್ನು ವಿತರಿಸಿದ್ದೇವೆ” ಎಂದು ವಿವರಿಸಿದರು.

“ಹಸಿದವರಿಗೆ ಅನ್ನ, ಉದ್ಯೋಗ ನೀಡುತ್ತಿರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಜನರ ಶಕ್ತಿಯೇ ನಮ್ಮ ಶಕ್ತಿ. ಜನರೇ ನಮ್ಮ ಆಸ್ತಿ. ನಾನು ತಾಲೂಕು ಪಂಚಾಯ್ತಿ ಅಧ್ಯಕ್ಷನಾಗಿದ್ದು, ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ಬೆಳೆಸಬೇಕು ಎಂಬ ರಾಜೀವ್ ಗಾಂಧಿ ಅವರ ಕಲ್ಪನೆ, ಈ ದೇಶದಲ್ಲಿ ಹೊಸ ನಾಯಕರನ್ನು ತಯಾರಾಗುವಂತೆ ಮಾಡಿದೆ. ಇದಕ್ಕಾಗಿ ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತರಲಾಯಿತು. ರಾಷ್ಟ್ರಪತಿಯಾಗಿದ್ದ ಮಾಜಿ ಸಿಎಂ ಬಿ.ಡಿ ಜತ್ತಿ ಬಿಜಾಪುರ ಜಿಲ್ಲೆಯ ಪಂಚಾಯ್ತಿ ಅಧ್ಯಕ್ಷರಾಗಿದ್ದರು, ವಿಲಾಸ್ ರಾವ್ ದೇಶಮುಖ್ ಅವರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಪ್ರಥಮ ಪ್ರಧಾನಿ ನೆಹರೂ ಅವರು ಕೂಡ ಅಲಹಬಾದ್ ಮುನ್ಸಿಪಾಲಿಟಿ ಅಧ್ಯಕ್ಷರಾಗಿದ್ದರು. ಕೆಂಗಲ್ ಹನುಮಂತಯ್ಯ ಅವರು ಕೂಡ ಬೆಂಗಳೂರು ಸಿಎಂಸಿ ಅಧ್ಯಕ್ಷರಾಗಿದ್ದರು. ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಗ್ರಾಮೀಣ ಭಾಗದ ಜನನರಿಗೆ ನಾಯಕತ್ವ ನೀಡಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ” ಎಂದು ಹೇಳಿದರು.

Tags: BreakingDCM DKSkannadanewsKarnatakaNewsHeadlinesVijayasakshivijayasakshinews
ShareSendShare
Previous Post

ಘೋರ ದುರಂತ: ಸಾಲಬಾಧೆಯಿಂದ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ!

Next Post

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ: ರಾಜೀವ್ ರೈ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ: ರಾಜೀವ್ ರೈ

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ: ರಾಜೀವ್ ರೈ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper