ಗದಗ:- ಮೆಕ್ಕೆಜೋಳ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಆರಂಭಿಸುವಂತೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಳೆದ 17 ದಿನಗಳಿಂದ ಕೊರೆಯುವ ಚಳಿ ಲೆಕ್ಕಿಸದೇ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಂಡ್ಯ.
ಇಂದು ಲಕ್ಷ್ಮೇಶ್ವರದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ರಿಬ್ಬನ್ ಕಟ್ ಮಾಡುವ ಮೂಲಕ ಗದಗ ಡಿಸಿ ಸಿ.ಎನ್. ಶ್ರೀಧರ್ ಉದ್ಘಾಟಿಸಿದರು. ಉದ್ಘಾಟನೆ ನಡೆಯದಂತೆ ರೈತರು ಘೋಷಣೆ ಕೂಗಿ, ಪಟಾಕಿ ಸಿಡಿಸಿ, ವಿಜಯೋತ್ಸವದಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು. ಸಾವಿರಾರು ಮಠ ರೈತರು, ಅಲಂಕಾರ ಹಾಕಿದ ಎತ್ತುಗಳು, ಭಾಜಾ ಮತ್ತು ರಣಕಹಳೆಗಳೊಂದಿಗೆ ಪಟ್ಟಣವೇ ಹಬ್ಬದ ಬ್ಯಾಂಡ್ ವಾತಾವರಣ ಪಡೆದಿತ್ತು. ಧರಣಿ ವೇದಿಕೆಯನ್ನು ಬಾಳೆ ಗಿಡಗಳಿಂದ ಅಲಂಕರಿಸಿ ವಿಜಯೋತ್ಸವ ಆಚರಿಸಲಾಯಿತು.
ಉದ್ಘಾಟನೆಯ ಸಂದರ್ಭದಲ್ಲಿ ತೀವ್ರ ಅಸ್ವಸ್ಥಗೊಂಡ ಕುಮಾರ ಮಹಾರಾಜರನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. 17 ದಿನಗಳ ಹೋರಾಟಕ್ಕೆ ಸಿಕ್ಕ ಈ ಜಯ ಲಕ್ಷ್ಮೇಶ್ವರ ರೈತರಲ್ಲಿ ಹೊಸ ಉತ್ಸಾಹ ತುಂಬಿತು.
ತೀವ್ರಗೊಂಡ ಪ್ರತಿಭಟನೆ:
ಇನ್ನೂ ಕಳೆದ 17 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಇಂದು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ. ನಡು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪ್ರಯಾಣಿಕರು ಕೂಡ ಪರದಾಡಿದ ದೃಶ್ಯ ಕಂಡು ಬಂತು.
ಒಟ್ಟಾರೆ ರೈತರ ಹೋರಾಟಕ್ಕೆ ಮಣಿದಿರುವ ಸರ್ಕಾರವು ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ.


