ಕಾಂಗ್ರೆಸ್ ನ ಮಾಜಿ ಶಾಸಕ ಆರ್‌.ವಿ.ದೇವರಾಜ್‌ ವಿಧಿವಶ: ನಾಳೆ ಅಂತ್ಯಕ್ರಿಯೆ!

0
Spread the love

ಮೈಸೂರು:- ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ.

Advertisement

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಆರ್ ವಿ ದೇವರಾಜ್ ಅವರು, 1957ರ ಡಿಸೆಂಬರ್ 3ರಂದು ಜನಿಸಿದ್ದರು. ಶಿಕ್ಷಣದ ಬಳಿಕ 1989-99ರಲ್ಲಿ ಚಾಮರಾಜಪೇಟೆ ಶಾಸಕರಾಗಿದ್ದರು. 2000ರಿಂದ ಅಕ್ಟೋಬರ್ 2007ರವರೆಗೆ ಕೆಎಸ್​​ಆರ್​​​ಟಿಸಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿದ್ದರು.

ಸಮಯದಲ್ಲಿ ಕಾಂಗ್ರೆಸ್​ಗೆ ಪೂರಕವಾಗಿದ್ದ 2008ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ಎಸ್​ಎಂ ಕೃಷ್ಣಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ಬಿಟ್ಟುಕೊಡುತ್ತಾರೆ. ಚಾಮರಾಜಪೇಟೆ ಕ್ಷೇತ್ರ ಆ ಸಮಯದಲ್ಲಿ ಕಾಂಗ್ರೆಸ್​ಗೆ ಪೂರಕವಾಗಿತ್ತು. ಎಸ್ಎಂ ಕೃಷ್ಣ ಸಿಎಂ ಆಗಿದ್ದಾಗ ಆರ್​.ವಿ ದೇವರಾಜ್ ಆಪ್ತರಾಗಿದ್ದರು. ಬಳಿಕ ಚಿಕ್ಕಪೇಟೆ ಕ್ಷೇತ್ರ ಚುನಾವಣೆ ಸ್ಪರ್ಧಿಸಿದ್ದರು.

ಮಾಜಿ ಶಾಸಕ ಆರ್​.ವಿ. ದೇವರಾಜ್ ಅವರ ಅಗಲಿಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್​, ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ನಾಳೆ ಅಂತ್ಯಕ್ರಿಯೆ:-

ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿದ್ದ ಮೃತದೇಹವನ್ನು ಇಂದು ಬೆಳಗ್ಗೆ ಅಂಬುಲೆನ್ಸ್‌ ಮೂಲಕ ಕಲಾಸಿಪಾಳ್ಯ ಬಳಿಯ ಮನೆಗೆ ತರಲಾಯಿತು.

ಹತ್ತು ಗಂಟೆಯ ನಂತರ ಜೆಸಿ ರಸ್ತೆಯ ಪಕ್ಷದ ಕಚೇರಿ ಬಳಿ ಸಾರ್ವಜನಿಕ ವ್ಯವಸ್ಥೆಗೆ ಸಿದ್ದತೆ ನಡೆಸಲಾಗಿದೆ. ನಾಳೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂದೇ ಕನಕಪುರ ಸೋಮನಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here