ಬೆಂಗಳೂರು: ಎಂಎಲ್ ಎ ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಂಎಲ್ ಎ ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ನಿಧನರಾಗಿದ್ದಾರೆ. ನಾಳೆಯೇ ಅವರ ಜನ್ಮದಿನವಾಗಿದ್ದರಿಂದ,ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜುಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.


