ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಬೇಡವಾದರೆ ಮೊಬೈಲ್​ನಿಂದ ಡಿಲೀಟ್ ಮಾಡಬಹುದು: ಜ್ಯೋತಿರಾದಿತ್ಯ ಸಿಂಧಿಯಾ

0
Spread the love

ನವದೆಹಲಿ: ಎಲ್ಲಾ ಹೊಸ ಮೊಬೈಲ್ ಫೋನ್ ​ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ ಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪನಿಗಳಿಗೆ ನಿರ್ದೇಶನ ನೀಡಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯೇ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ ಆ ಅಪ್ಲಿಕೇಷನ್ ಬೇಡವಾದರೆ ಮೊಬೈಲ್​ನಲ್ಲಿ ಡಿಲೀಟ್ ಮಾಡಬಹುದು. ಈ ಆ್ಯಪ್​ ಅನ್ನು ಎಲ್ಲರಿಗೂ ಪರಿಚಯಿಸುವುದು ನಮ್ಮ ಕರ್ತವ್ಯ. ಅದನ್ನು  ಇಟ್ಟುಕೊಳ್ಳಬೇಕೋ ಬೇಡವೋ ಎಂಬುದು ಬಳಕೆದಾರರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

ಈ ಆ್ಯಪ್ ಸಂಪೂರ್ಣವಾಗಿ ಐಚ್ಛಿಕವಾಗಿದೆ. ನೀವು ಅದನ್ನು ಡಿಲೀಟ್‌ ಮಾಡಬೇಕಾದರೆ ಯಾವ ಸಮಯದಲ್ಲಿ ಬೇಕಾದರೂ ಡಿಲೀಟ್‌ ಮಾಡಬಹುದು. ಈ ಅಪ್ಲಿಕೇಶನ್ ಯಾವುದೇ ರೀತಿಯ ಕಣ್ಗಾವಲಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಗ್ರಾಹಕರಿಗೆ ಸಹಾಯ ಮಾಡುವುದು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯ. ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರತಿಯೊಬ್ಬ ಗ್ರಾಹಕರು ತಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಸಂಚಾರ್ ಸಾಥಿಯಿಂದಾಗಿ ಸುಮಾರು 20 ಲಕ್ಷ ಕದ್ದ ಫೋನ್‌ಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಸುಮಾರು 7.5 ಲಕ್ಷ ಕದ್ದ ಫೋನ್‌ಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಅದನ್ನು ಅವರ ಸಾಧನಗಳಲ್ಲಿ ಇನ್‌ಸ್ಟಾಲ್‌ ಮಾಡುವುದು ಅನ್‌ಇನ್‌ಸ್ಟಾಲ್‌ ಮಾಡುವುದು ಬಳಕೆದಾರರಿಗೆ ಬಿಟ್ಟ ವಿಚಾರ. ಇದನ್ನು ಯಾವುದೇ ಇತರ ಅಪ್ಲಿಕೇಶನ್‌ನಂತೆ ಮೊಬೈಲಿನಿಂದ  ಅಳಿಸಬಹುದು ಎಂದರು.

 


Spread the love

LEAVE A REPLY

Please enter your comment!
Please enter your name here