ಕಣವಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಸಚಿವ ಎಚ್.ಕೆ. ಪಾಟೀಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬೆಂಬಲ ಬೆಲೆಯಡಿ ಪ್ರತಿ ರೈತನಿಂದ 5 ಕ್ವಿಂಟಾಲ್ ಮೆಕ್ಕೆಜೋಳವನ್ನು ಖರೀದಿ ಮಾಡಲು ನಿರ್ಧರಿಸಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಕನಿಷ್ಠ 12ರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್‌ಗೆ 2400ರೂ.ಗಳಂತೆ ಖರೀದಿ ಪ್ರಾರಂಭಿಸಲಾಗುವುದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರವಾಸೋದ್ಯಮ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

Advertisement

ಗದಗ ಜಿಲ್ಲೆಯ ಮುಳಗುಂದ ಸಮೀಪದ ಕಣವಿ ಗ್ರಾಮದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಗದಗ ತಾಲೂಕು ಮಲ್ಲಸಮುದ್ರ ಗ್ರಾಮದಲ್ಲಿ ಧಾರವಾಡ ಹಾಲು ಒಕ್ಕೂಟದ ಹಾಲು ಸಂಗ್ರಹಣ ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ನೋಂದಣಿ ಪ್ರಕ್ರಿಯೆ ಮಂಗಳವಾರ ಪ್ರಾರಂಭಿಸಲಾಗಿದೆ. ಪ್ರಸಕ್ತ ವರ್ಷ ರಾಜ್ಯದಲ್ಲಿ ಅಂದಾಜು 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬಿತ್ತನೆ ಮಾಡಿ ಬೆಳೆ ಬೆಳೆದಿದ್ದು, ಖರೀದಿ ಪ್ರಕ್ರಿಯೆಯನ್ನು ಹೇಗೆ ಮಾಡಬೇಕೆಂಬುದು ಸರಕಾರಕ್ಕೆ ಒಂದು ದೊಡ್ಡ ಸವಾಲಾಗಿತ್ತು. ರೈತರ ಕಷ್ಟಕ್ಕೆ ಸರ್ಕಾರ ಹೇಗಾದರೂ ಮಾಡಿ ಸ್ಪಂದಿಸಬೇಕು ಎಂಬ ಉದ್ದೇಶದಿಂದ ಪ್ರತಿ ರೈತನಿಂದ ಕನಿಷ್ಠ 12 ಕ್ವಿಂಟಲ್, ಗರಿಷ್ಠ 20 ಕ್ವಿಂಟಲ್ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಮಾಡಲಾಗುವುದು ಎಂದರು.

ಅಂದಾಜು 33 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಹಳ್ಳಿ ಗ್ರಾಮೀಣ ಸಂತೆ ಕಟ್ಟಡದ ಉದ್ಘಾಟನೆ, ರಂಗ ಮಂದಿರ ಹಾಗೂ ನಾಟಕ ಮನೆಯ ಉದ್ಘಾಟನೆ, ವಿ.ಪ ಸದಸ್ಯ ಎಸ್.ವಿ. ಸಂಕನೂರ ಒದಗಿಸಿದ ಅನುದಾನದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಚಿವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಗ್ರಾ.ಪಂ ಅಧ್ಯಕ್ಷೆ ಹಾಲವ್ವ ಕುರಿ, ಉಪಾಧ್ಯಕ್ಷೆ ರೇಣವ್ವ ತಳವಾರ, ಗದಗ ತಾ.ಪಂ ಮಾಜಿ ಅಧ್ಯಕ್ಷ ಶರಣ ಬಸನಗೌಡ ಪಾಟೀಲ, ಬಾಬುಸಾಬ ಕಿಲ್ಲೆದಾರ, ಬಸವರಾಜ ಬಂದಕ್ಕನವರ, ಪರಪ್ಪ ಕೋಳಿವಾಡ, ಯಲ್ಲಪ್ಪ ಕೋರಿ, ಪ್ರಕಾಶ ಕುರ್ತಕೋಟಿ, ಗಂಗಣ್ಣ ಗಡಾದ, ಕೃಷ್ಣ ನಾಗಲೋಟಿ, ಎಸ್.ವಾಯ್. ಕೋರಿ, ಶರೀಫ ದೊಡ್ಮನಿ, ಅಕ್ಕಮಹಾದೇವಿ ಬಳಿಗಾರ, ಪಾರವ್ವ ಕುರ್ತುಕೋಟಿ, ಮಂಜುನಾಥ ಕೋರಿ, ಶಂಕ್ರಪ್ಪ ಕೋಳಿವಾಡ, ಪ್ರಭು ಹುಡೇದ, ಬಿ.ಟಿ. ಸೋಮರಡ್ಡಿ, ಶಿವಾನಂದ ಮಾದಣ್ಣವರ, ನಿಂಗಪ್ಪ ಛಲವಾದಿ ಮತ್ತಿತರರು ಇದ್ದರು.

ಕಣವಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಮೈದಾನ ಹಾಗೂ ಹೈಮಾಸ್ಟ್ ವಿದ್ಯುತ್ ದೀಪ ಉದ್ಘಾಟಿಸಲಾಯಿತು. ಕ್ರೀಡಾಕೂಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಅಂದಾಜು 16 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಗ್ರಾಮ ಪಂಚಾಯಿತಿ ಉಪಕಾರ್ಯಾಲಯವನ್ನು ಸಚಿವ ಹೆಚ್.ಕೆ. ಪಾಟೀಲ ಉದ್ಘಾಟಿಸಿದರು. ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ 41 ಲಕ್ಷ ರೂಗಳ ವೆಚ್ಚದಲ್ಲಿ ಮೂರು ಕೊಠಡಿಗಳನ್ನು ಉದ್ಘಾಟಿಸಲಾಯಿತು. ಅಂದಾಜು 18 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಅಂಬೇಡ್ಕರ್ ಭವನ ಉದ್ಘಾಟನೆಯನ್ನು ಇದೇ ಸಂದರ್ಭದಲ್ಲಿ ಸಚಿವರು ನೆರವೇರಿಸಿದರು.


Spread the love

LEAVE A REPLY

Please enter your comment!
Please enter your name here