ಗದಗ:- ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ವಾಲಿದ ಪರಿಣಾಮ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಜ್ಜೂರು ಗ್ರಾಮದ ಹೊರವಲಯದಲ್ಲಿ ಜರುಗಿದೆ.
Advertisement
ಗದಗದಿಂದ ಕೆರಳ್ಳಿ ತಾಂಡೆಗೆ ಹೊರಟಿದ್ದ ವೇಳೆ ಮಜ್ಜೂರು ಹಾಗೂ ಮಾಚೇನಹಳ್ಳಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ವಾಲಿದೆ. ಪರಿಣಾಮ ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿರಹಟ್ಟಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ ಅಪಘಾತಗುತ್ತಿದ್ದಂತೆ ಚಾಲಕ ಪರಾರಿ ಆಗಿದ್ದು, ಸ್ಥಳಕ್ಕೆ ಶಿರಹಟ್ಟಿ ಪಿಎಸ್ ಐ ಈರಪ್ಪ ರಿತ್ತಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


