ಬಾಗಲಕೋಟೆ:- ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ವಿಶ್ವನಾಥ ಕಂಬಾರ(17), ಗಣೇಶ್ ಅರಳಿಮಟ್ಟಿ(20), ಪ್ರವೀಣ ಶೇಡಬಾಳ(22) ಪ್ರಜ್ವಲ್ ಶೇಡಬಾಳ(17) ಮೃತರು. ಇವರು ಸಿದ್ದಾಪುರ ಗ್ರಾಮದವರು ಎನ್ನಲಾಗಿದೆ. ಸಿದ್ದಾಪುರ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ವೊಂದು ಹೊರಟಿತ್ತು. ಈ ವೇಳೆ ಕಾರು ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


