ಕಲಬುರಗಿ:- ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
Advertisement
20 ವರ್ಷದ ಭೂಮಿಕಾ ಹಂಗರಗಾ ಮೃತ ದುರ್ದೈವಿ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕ ಮತ್ತು ಯುವತಿ ಜೇವರ್ಗಿ ಪಟ್ಟಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಎನ್‌ಇಕೆಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


