ಅತಿಥಿ ಉಪನ್ಯಾಸಕರ ಕುಟುಂಬ ಬೀದಿಗೆ: ಡಾ. ಹನುಮಂತಗೌಡ ಆರ್. ಕಲ್ಮಾನಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಲವು ವರ್ಷಗಳಿಂದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಪಾಠ ಮಾಡುತ್ತಾ ಬಂದಿರುವ 6 ಸಾವಿರ ಅತಿಥಿ ಉಪನ್ಯಾಸಕರ ಕುಟುಂಬ ಬೀದಿಗೆ ಬೀಳುವಂತಾಗಿದೆ. ಸರಕಾರ ಸೇವೆಯಿಂದ ಮುಂದುವರೆಸಬೇಕು ಮತ್ತು ಸೇವೆ ಸಲ್ಲಿಸಿ ಹೊರಗುಳಿದವರಿಗೂ ಅವಕಾಶ ನೀಡಬೇಕು ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮಾನಿ ಆಗ್ರಹಿಸಿದರು.

Advertisement

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ನಗರದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿ ಅವರು ಮಾತನಾಡಿ, ಸರಕಾರ ಅತಿಥಿ ಉಪನ್ಯಾಸಕರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಇದನ್ನೆಲ್ಲ ನೋಡುತ್ತಿರುವ ಬುದ್ಧಿಜೀವಿಗಳು, ಇವರಿಂದ ಜ್ಞಾನ ಪಡೆದ ಲಕ್ಷಾಂತರ ವಿದ್ಯಾರ್ಥಿಗಳು ಇತ್ತ ಗಮನವಿಟ್ಟು ನೋಡುತ್ತಿದ್ದಾರೆ. ಇದರ ಪರಿಣಾಮ ನಿಮ್ಮ ಮೇಲೆ ಬೀಳಲಿದೆ. ಶೀಘ್ರವೇ ನಮಗೆ ನ್ಯಾಯ ನೀಡದಿದ್ದರೆ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಅತಿಥಿ ಉಪನ್ಯಾಸಕಿ ಗೀತಾ ಎಮ್.ಕೆ ಮಾತನಾಡಿ, ಹೋರಾಟದಲ್ಲಿ ನಿರತರಾಗಿರುವ ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಕಾಳಜಿ ತೋರಿಸದಿರುವುದು ಶೋಚನೀಯ ಸಂಗತಿಯಾಗಿದೆ ಎಂದರು.

ಅತಿಥಿ ಉಪನ್ಯಾಸಕ ಶರಣಪ್ಪ ಮಡಿವಾಳರ ಮಾತನಾಡಿ, ಮಾನವೀಯತೆಯಡಿ ಹಲವು ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಬದುಕು ಕಟ್ಟಿದ ನಮಗೆ ಇವತ್ತು ನಾನ್ ಯುಜಿಸಿ ಎಂದು ಹೇಳಿ ದಿಢೀರನೆ ಬೀದಿಗೆ ತಳ್ಳುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಹೋರಾಟದಲ್ಲಿ ಎಮ್.ವಿ. ದೇಶಾಯಿಗೌಡರ, ಶರಣು ಮರಗುದ್ದಿ, ಭಗತ್ ಸಿಂಗ್ ನವಲೂರಕರ, ಎಸ್.ಎ. ಸಂಗನಾಳ, ಶಾಂತನಗೌಡ ಹುಲ್ಲುರ, ಶ್ರೀದೇವಿ, ರೇಖಾ, ಗೀತಾ ಮೇಟಿ ಸೇರಿದಂತೆ ಹಲವು ಜಿಲ್ಲೆಗಳ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here