ಚಿಕ್ಕಮಗಳೂರು:- ಚಿಕ್ಕಮಗಳೂರು ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ವಿಚಾರವಾಗಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜರಂಗ ದಳ ಕಾರ್ಯಕರ್ತನನ್ನು ಅರೆಸ್ಟ್ ಮಾಡಲಾಗಿದೆ.
ಮಿಥುನ್ ಬಂಧಿತ ಬಜರಂಗ ದಳ ಕಾರ್ಯಕರ್ತ. ಪ್ರಕರಣದಲ್ಲಿ ಮಿಥುನ್ ಪಾತ್ರ ಇರೋದು ದೃಢಪಟ್ಟ ಹಿನ್ನೆಲೆ ಆತನನ್ನು ಬಂಧಿಸಲಾಗಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿ ಮಿಥುನ್ನನ್ನು ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಗಣೇಶ್ ಹತ್ಯೆಯಲ್ಲಿ A6 ಆಗಿರುವ ಮಿಥುನ್ A1 ಸಂಜಯ್ ಸ್ನೇಹಿತನಾಗಿದ್ದು, RSS ಮತ್ತು ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತ ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್ಗಾಗಿ ಹುಡುಕಾಟ ಮುಂದುವರಿದಿದೆ. ಗಣೇಶ್ ಹತ್ಯೆ ಬಳಿಕ ಈ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.


