ಚಿಕ್ಕಬಳ್ಳಾಪುರ:- ಜಿಲ್ಲೆ ಭಾಗ್ಯನಗರ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಲಾರಿ, ಬಸ್, ಆಟೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ಘಟನೆ ಜರುಗಿದೆ.
ಚಿಲುವೆಂದುಲ ಗ್ರಾಮದ 68 ವರ್ಷದ ವೃದ್ದ ಮೃತ ದುರ್ದೈವಿಯಾಗಿದ್ದಾರೆ. ಸುಂಕುಲಮ್ಮ ದೇಗುಲದಿಂದ ಬರುತ್ತಿದ್ದ ಆಟೋ ತಿರುವು ಪಡೆದುಕೊಳ್ಳುವ ವೇಳೆ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಡಿಕ್ಕಿಯ ರಭಸಕ್ಕೆ ಪಲ್ಟಿಯಾದ ಆಟೋ ಬಸ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.



