HomeBelgaumಖಾದಿಯು ದೇಶದ ಹೆಮ್ಮೆಯ ಸಂಕೇತ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಖಾದಿಯು ದೇಶದ ಹೆಮ್ಮೆಯ ಸಂಕೇತ: ಮುಖ್ಯಮಂತ್ರಿ ಸಿದ್ಧರಾಮಯ್ಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಬೆಳಗಾವಿ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ರಾಷ್ಟ್ರದ 2ನೇ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು.

75 ಅಡಿ ಉದ್ದ ಹಾಗೂ 55 ಅಡಿ ಅಗಲದ ವಿಶಾಲ ದ್ವಜವು ದೇಶಪ್ರೇಮದ ಸಂಕೇತವಾಗಿದ್ದು, ನೋಡುಗರಲ್ಲಿ ದೇಶಭಕ್ತಿಯ ಸುಂದರ ಭಾವನೆಗಳನ್ನು ಬಿತ್ತಲಿದೆ. ಇಂತಹ ಮಹತ್ವದ ಧ್ವಜದ ನಿರ್ಮಾಣಕ್ಕೆ ಶ್ರಮಿಸಿದ ವಿನೋದಕುಮಾರ ರೇವಪ್ಪ ಬಮ್ಮಣ್ಣವರ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮುಖ್ಯಮಂತ್ರಿಗಳು ಮಾತನಾಡಿ, ವಿಧಾನಸಭೆಯ ಭವ್ಯ ಮೆಟ್ಟಿಲುಗಳ ಮೇಲೆ ಜಗತ್ತಿನ 2ನೇ ಬೃಹತ್ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣಕ್ಕೆ ಶ್ರಮಿಸಿ ಉತ್ತಮ ಕಾರ್ಯ ಮಾಡಿದ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ಅವರ ತಂಡದವರಿಗೆ ಮತ್ತು ಈ ಧ್ವಜದ ನೇಯ್ಗೆಗೆ ಶ್ರಮಿಸಿದ ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದಕುಮಾರ ರೇವಪ್ಪ ಬೊಮ್ಮಣ್ಣವರ ಅವರಿಗೆ ಸರ್ಕಾರದಿಂದ ಅಭಿನಂದನೆ ತಿಳಿಸುವೆ ಎಂದರಲ್ಲದೆ, ಖಾದಿಯು ಕೇವಲ ವಸ್ತುವಲ್ಲ, ದೇಶದ ಹೆಮ್ಮೆಯ ಸಂಕೇತ ಎಂದರು.

ನಾವೆಲ್ಲರೂ ಜಾತ್ಯಾತೀತರಾಗುವುದು ಈಗ ಅತೀ ಅವಶ್ಯವಿದೆ. ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು. ನಾವು ಭ್ರಾತೃತ್ವವನ್ನು ಸಾಧಿಸಿದ್ದೇವೆ. ನಾವು ದೇಶಪ್ರೇಮ ಬೆಳೆಸಿಕೊಳ್ಳದೇ ಹೋದರೆ ಮನುಷ್ಯರಾಗಿ ಬಾಳಲು ಸಾಧ್ಯವಾಗುವುದಿಲ್ಲ. ವಿದ್ಯಾರ್ಥಿಗಳಲ್ಲಿ, ಯುವಜನರಲ್ಲಿ ದೇಶಭಕ್ತಿಯ ಭಾವ ಬೆಳೆಸುವ ಕಾರ್ಯವಾಗಬೇಕು ಎಂದರು.

ಪ್ರತಿಯೊಬ್ಬರಿಗೂ ಸಂವಿಧಾನದ ಮಹತ್ವ ತಿಳಿಸಲು ಎಲ್ಲಾ ಕಡೆ ಸಂವಿಧಾನ ಪೀಠಿಕೆ ಬೋಧಿಸುವ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ತಿಳಿಸಿದರು.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮಾತನಾಡಿ, ಗಾಂಧೀಜಿ ಭೇಟಿ ನೀಡಿದ ನೆಲವಾದ ಬೆಳಗಾವಿಯಲ್ಲಿ 2ನೇ ಅತಿ ದೊಡ್ಡ ರಾಷ್ಟ್ರಧ್ವಜದ ಅನಾವರಣ ನಡೆದಿದ್ದು ಸಂತಸ ತಂದಿದೆ. ಇದರ ಹಿಂದಿನ ಶ್ರಮ, ಬದ್ಧತೆ ಹಾಗೂ ಧ್ವಜದ ಮೇಲಿನ ಪ್ರೇಮ ಶ್ಲಾಘನೀಯವಾದುದು ಎಂದರು.

ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ ಮಾತನಾಡಿ, ಇದು ಕೇವಲ ಧ್ವಜವಲ್ಲ. ರಾಷ್ಟ್ರಭಕ್ತಿ, ರಾಷ್ಟ್ರಪ್ರೇಮದ ಸಂಕೇತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಸಚಿವರಾದ ಡಾ. ಹೆಚ್.ಸಿ. ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಶಾಸಕರಾದ ಅಶೋಕ ಪಟ್ಟಣ, ತಮ್ಮಯ್ಯ, ಸಲೀಂ ಅಹ್ಮದ್, ನಸೀರ್ ಅಹ್ಮದ್ ಮುಂತಾದವರು ಇದ್ದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಾತನಾಡಿ, ಈ ತ್ರಿವರ್ಣ ಧ್ವಜದಿಂದಾಗಿ ಜನತೆಗೆ ರಾಷ್ಟ್ರಭಕ್ತಿ ಮೂಡಲಿದೆ. ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ರವಾನೆಯಾಗಲಿದೆ. ಇದಕ್ಕೆ ಶ್ರಮಿಸಿದ ಸಭಾಧ್ಯಕ್ಷರಾದ ಯು.ಟಿ. ಖಾದರ್, ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾಗೂ ಅವರ ತಂಡದವರಿಗೆ ಅಭಿನಂದನೆಗಳನ್ನು ತಿಳಿಸುವೆ ಎಂದರಲ್ಲದೆ, ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!